ಆರೋಗ್ಯ ಅರಿವು ಕಾರ್ಯಕ್ರಮ
ಉಡುಪಿ ಮೇ, 18: ಡಾ.ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆ, IQAC ಮತ್ತು ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ವಿದ್ಯಾರ್ಥಿನಿಯರಿಗರ ಆರೋಗ್ಯ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ.ಸ್ವಾತಿ ಶೇಟ್ ತಜ್ಞ ವೈದ್ಯರು ಆಯುಷ್ ಪಂಜಕರ್ಮ ವಿಭಾಗ, ಜಿಲ್ಲಾ ಆಸ್ಪತ್ರೆ ಉಡುಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮನಿಸಿ ವಿದ್ಯಾರ್ಥಿನಿಯರಿಗೆ ಹೆಣ್ಣು ಮಕ್ಕಳ ಆರೋಗ್ಯ, ಶುಚಿತ್ವ ಮತ್ತು ಕಾಳಜಿಗಳ ಕುರಿತು ಮಾಹಿತಿಯನ್ನು ನೀಡಿ, ಸಂವಾದ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್ ವಹಿಸಿದರು. ವೇದಿಕೆಯಲ್ಲಿ ಕಾಲೇಜಿನ IQAC ಸಂಚಾಲಕರಾದ ಶ್ರೀ. ಸೋಜನ್ ಕೆ.ಜಿ ಉಪಸ್ಥಿತರಿದ್ದರು. ಪ್ರೊ. ನಿಕೇತನ, ರಾಷ್ಟ್ರೀಯ ಸೇವಾ ಯೋಜನೆ ಘಟಕ- 1 ರ ಯೋಜನಾಧಿಕಾರಿ ಸ್ವಾಗತಿಸಿದರು. ಕು. ಪ್ರೀತಿ ನಿರೂಪಿಸಿ, ಶ್ರೀಮತಿ ವಿದ್ಯಾ ಡಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ- 2 ಇವರು ವಂದಿಸಿದರು.
👌👌
ReplyDelete👌👌
ReplyDelete